ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ವರ್ಗದವರಿಗೆ ದ್ರೋಹ ಮಾಡುತ್ತಿದ್ದಾರೆ- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ. ಶಿವಮೊಗ್ಗ, ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಗ್ಗೆ ಸಾಕಷ್ಟು ಗೊಂದಲ ಏರ್ಪಟ್ಟಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಹಿಂದುಳಿದವರಿಗೆ ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ತನಿಖೆಗೆ ನೀಡಿದ ಅನುಮತಿ ವಾಪಸ್ ಪಡೆದ ಕುರಿತು ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ಡಿಸಿಎಂ ಡಿಕೆ ಶಿವಕುಮಾರ್​ ಅವರು ನ್ಯಾಯಲಯಕ್ಕೆ ಅಲೆಯುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ್ಯತೆ ಹಾಳು ಮಾಡುತ್ತಿದ್ದಾರೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್​ ವಿರುದ್ಧವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್​ ಜೈಲಿಗೆ ಹೋಗುತ್ತಾರೆ. ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ‌ಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್​ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡಿದ್ದಾರೆ ಎಂದು ಕೆಎಸ್​ ಈಶ್ವರಪ್ಪ ಕಿಡಿಕಾರಿದರು. : - – - - .