ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಏನು ನಿರ್ಧಾರ ಮಾಡುತ್ತೋ ನೋಡೋಣ ಎಂದ ಮಾಜಿ ಸಿಎಂ ಬಿಎಸ್ ವೈ. ಬೀದರ್,ನವೆಂಬರ್,22,2023(..):ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಏನು ನಿರ್ಧಾರ ಮಾಡುತ್ತೋ ನೋಡೋಣ ಎಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಜಾತಿ ಗಣದ ವರದಿ ಬಗ್ಗೆ ಸ್ಪಷ್ಟವಾಗಿ ಏನು ಹೇಳುವುದಕ್ಕೆ ಇಷ್ಟಪಡಲ್ಲ. ಜನರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಮಾಡುತ್ತೇವೆ. ಜಾತಿ ಜನಗಣತಿಗೆ ಲಿಂಗಾಯತ ಒಕ್ಕಲಿಗರ ವಿರೋಧವಿದೆ ಎಂದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಯತ್ನಾಳ್ ಜೊತೆ ಚರ್ಚೆ ಮಾಡಿ ಸರಿಪಡಿಸಿಕೊಳ್ಳುತ್ತೇವೆ ಎಂದರು. : - - – –- -