ಕೆಇಎ: ಡಿ.23ಕ್ಕೆ 545 ಪಿಎಸ್ ಐ ಹುದ್ದೆಗಳಿಗೆ ಮರು‌ ಪರೀಕ್ಷೆ. ಬೆಂಗಳೂರು,ನವೆಂಬರ್,22,2023(..):ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ ‌23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್ಐ‌ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು‌ ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 2021ರ ಜನವರಿ 21ರಂದು ಪೊಲೀಸ್‌ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್‌ 3 ರಂದು ಲಿಖಿತ ಪರೀಕ್ಷೆ ನಡೆದಿತ್ತು. : -- – 545 - - 23