ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೈಸೂರು,ನವೆಂಬರ್,20,2023(..):ಹಳೇ ಮೈಸುರು ಭಾಗಕ್ಕೆ ನನ್ನ ಪ್ರಥಮ ಆದ್ಯತೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆದ್ದು ಪ್ರಧಾನಿ ಮೋದಿ ಅವರ ಕೈಬಲಪಡಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ ಬಂದರೂ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇವೆ. ಮೈಸೂರು ನನಗೆ ಅವಿನಾಭಾವ ಸಂಬಂಧ ಹೊಂದಿರುವ ಜಿಲ್ಲೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ಎಂದು ಹೇಳಿದರು. ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟವಾಗುತ್ತದೆ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಬಿವೈ ವಿಜಯೇಂದ್ರ, ಅಸಮಾಧಾನ ಎಲ್ಲಿ ಸ್ಪೋಟವಾಗುತ್ತದೆ ಎಂಬುದನ್ನ ಕಾದು ನೋಡಿ ಎಂದರು. ಅಧೀಕಾರದ ಅಮಲಿನಲ್ಲಿ ಕಾಂಗ್ರೆಸ್ ತೇಲುತ್ತಿದೆ. ರಾಜ್ಯದ ಜನರು ಕಾಂಗ್ರೆಸ್ ನಾಯಕರಿಗೆ ಶಾಪ ಹಾಕುತ್ತಿದ್ದಾರೆ. ಮೈಸೂರು ಸಿದ್ದರಾಮಯ್ಯಗೆ ರಾಜಕೀಯ ಜನ್ಮ ಕೊಟ್ಟ ಜಿಲ್ಲೆ. ಈಗ ಹಾದಿಬೀದಿಯಲ್ಲಿ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಕೆಳಗಿಳಿಸಲು ಡಿಕೆ ಶಿವಕುಮಾರ್ ತಂತ್ರ ಮಾಡಿದ್ದಾರೆ ಎಂದು ಟಾಂಗ್ ಕೊಟ್ಟರು. : - – - - -..