ಆಟೋ ಬಿಡಿಭಾಗ; ಸ್ವಾವಲಂಬನೆ ಸಾಧಿಸಲು ಉದ್ಯಮಕ್ಕೆ ಕೇಂದ್ರ ಸಚಿವ ಹೆಚ್.ಡಿಕೆ ಸಲಹೆ ನವದೆಹಲಿ,ಸೆಪ್ಟಂಬರ್,9,2024 (..):ಆಟೋ ಬಿಡಿಭಾಗಗಳ ಮೇಲೆ ಇತರೆ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಅಟೋ ಉದ್ಯಮಕ್ಕೆ ಸಲಹೆ ನೀಡಿದ ಕೇಂದ್ರ ಭಾರೀ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಈ ನಿಟ್ಟಿನಲ್ಲಿ ಸ್ವಾವಲಂಬನೆ ಸಾಧಿಸಲು ದೊಡ್ಡ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು. ನವದೆಹಲಿಯಲ್ಲಿ ( ) 64ನೇ ಸಮಾವೇಶ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಅಟೋ ಉದ್ಯಮ ಬಿಡಿಭಾಗಗಳನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲೇಬೇಕು, ಹಾಗೂ ಫೇಮ್ 3 (-) ಜಾರಿಗೆ ಬರುವ ತನಕ ( ) ಯೋಜನೆಯನ್ನು ಮುಂದುವರಿಸಲಾಗುವುದು ಎಂದರು. ಸದ್ಯಕ್ಕೆ ಆಟೋ ಬಿಡಿಭಾಗ ತಯಾರಿಕಾ ಘಟಕಗಳು ಜಿಡಿಪಿಗೆ 2.7%ರಷ್ಟು ಕೊಡುಗೆ ನೀಡುತ್ತಿವೆ ಹಾಗೂ ಐದು ದಶಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿವೆ ಎಂದ ಅವರು, ಈ ಕ್ಷೇತ್ರದಲ್ಲಿ ಇನ್ನೂ ಉತ್ತಮ ಸಾಧನೆ ಮಾಡಲು ಅವಕಾಶ ಇದೆ. ಪ್ರಧಾನ ಮಂತ್ರಿಗಳ ಆತ್ಮನಿರ್ಭರ್ ಭಾರತ್ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳ ಪ್ರಕಾರ ನಾವು ವಿಕಸಿತ್ ಭಾರತ್ 2047 ಗುರಿಯನ್ನು ಮುಟ್ಟಲು ಸಾಧ್ಯವಿದೆ ಎಂದು ಅವರು ಹೇಳಿದರು. ಜಾಗತಿಕ ಮಟ್ಟದಲ್ಲಿ ದೇಶೀಯ ಆಟೋ ಬಿಡಿಭಾಗ ಉದ್ಯಮ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಅಲ್ಲದೆ ದುಬಾರಿ ಸಾರಿಗೆ, ವೆಚ್ಚಗಳ ಒತ್ತಡಕ್ಕೆ ಸಿಲುಕಿದೆ. ಇಷ್ಟಾದರೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಈ ಕ್ಷೇತ್ರದ ರಪ್ತು ವಹಿವಾಟು ಬೆಳವಣಿಗೆಯನ್ನು ಕಂಡಿದೆ ಎಂದು ಅವರು ಹೇಳಿದರು. ಈ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ, ಉತ್ಪಾದನಾ ಸಂಪರ್ಕ ಉಪಕ್ರಮ () ಗಳನ್ನು ಸಾಕಷ್ಟು ಕೈಗೊಂಡಿದೆ. ಈ ಮೂಲಕ ₹74,850 ಕೋಟಿ ಹೂಡಿಕೆಯನ್ನು ಉತ್ತೇಜಿಸಲಾಗಿದೆ. ಈ ಪೈಕಿ ₹17,836 ಮೊತ್ತ 2024 ಮಾರ್ಚ್ ಹೊತ್ತಿಗೆ ಹೂಡಿಕೆ ಆಗಿದೆ. ಇದರ ಪರಿಣಾಮವಾಗಿ 30,500 ಉದ್ಯೋಗ ಅವಕಾಶಗಳು ಸೃಷ್ಟಿಯಾಗಿವೆ. ಇದು ಉದ್ಯಮಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ ಎಂದು ಕೇಂದ್ರ ಸಚಿವ ಹೆಚ್.ಡಿಕೆ ಹೇಳಿದರು. ಫೇಮ್ 3 ಯೋಜನೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು. ಅದುವರೆಗೂ ಆಟೋ ಕ್ಷೇತ್ರಕ್ಕೆ ಉತ್ತೇಜನ ನೀಡಲು ಯೋಜನೆಯನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು. ಸಮಾವೇಶದಲ್ಲಿ ಅಧ್ಯಕ್ಷೆ ಶ್ರದ್ಧಾ ಸೂರಿ ಮರ್ವಾಹ್, ಅಧ್ಯಕ್ಷ ವಿನೋದ ಅಗರ್ವಾಲ್, ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಂಜೀವ ಪೂರಿ, ಮಾರುತಿ ಸುಜುಕಿ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಹಿಸಾಶಿ ತಕೇಚಿ ಮತ್ತು ಅಧ್ಯಕ್ಷ ಡಾ. ಪವನ್ ಗೋಯಂಕ ಸೇರಿದಂತೆ ಉದ್ಯಮದ ಗಣ್ಯರು ಹಾಜರಿದ್ದರು. : , , , , -