ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ ಜೆಡಿಎಸ್ ಹಲವು ನಾಯಕರು ಕಾಂಗ್ರೆಸ್ ಗೆ- ಸಚಿವ ಎಂ.ಬಿ.ಪಾಟೀಲ್. ವಿಜಯಪುರ,ನವೆಂಬರ್,16,2023(..):ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ-ಜೆಡಿಎಸ್ ನ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಬಿಜೆಪಿಯಿಂದ ಹಾಗೂ ಜೆಡಿಎಸ್​​ನಿಂದಲೂ ಕಾಂಗ್ರೆಸ್​ಗೆ ಬರುತ್ತಾರೆ. ಕಾದುನೋಡಿ ಲೋಕಸಭಾ ಚುನಾವಣೆ ವೇಳೆಗೆ ಎಲ್ಲಾ ಸ್ವಚ್ಛವಾಗುರುತ್ತದೆ ಬಹಳಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದರು. ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್​ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂಬಿ ಪಾಟೀಲ್, ನನಗೆ ಆ ಬಗ್ಗೆ ಗೊತ್ತಿಲ್ಲ, ಸತ್ಯಾಸತ್ಯತೆ ತಿಳಿದುಕೊಂಡು ಮಾತನಾಡುತ್ತೇನೆ. ವಿಡಿಯೋ ಮಾಧ್ಯಮದವರದ್ದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್​ ಬಂದಿದೆ. ಈ ಹಿಂದೆ ನಂದೇ ಧ್ವನಿಯನ್ನು ಮಹಾರಾಷ್ಟ್ರದ ಒಬ್ಬ ಮಿಮಿಕ್ರಿ ಮಾಡಿದ್ದ. ಆಗ ಆತನನ್ನು ಅರೆಸ್ಟ್ ಮಾಡಿಸಿದ್ದೆವು. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಂದಿದೆ, ಬದಲಾವಣೆ ಮಾಡಬಹುದು ಎಂದು ತಿಳಿಸಿದರು. : - -- - – – - .