ವಿಡಿಯೋ ಬಗ್ಗೆ ತನಿಖೆಯಾಲಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ- ಮಾಜಿ ಸಚಿವ ಆರ್.ಅಶೋಕ್ ಆಗ್ರಹ. ಬೆಂಗಳೂರು,ನವೆಂಬರ್,16,2023(..):ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಶಾಸಕ ಆರ್.ಅಶೋಕ್ ಅವರು ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಆರ್.ಅಶೋಕ್, ಯತೀಂದ್ರ ಬೆಳವಣಿಗೆ ಇವತ್ತಿಂದಲ್ಲ. ಸರ್ಕಾರ ಬಂದಾಗಿಲಿನಿಂದ ಸಿಎಂ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರಾಗಿದೆ. ಈಗ ಬಂದಿರುವ ವೀಡಿಯೋ 10ನೇಯದ್ದೋ 15ನೇಯದ್ದೋ ಇರಬೇಕು. ಕಾಂಗ್ರೆಸ್ ಅಂದರೆ ಈ ರೀತಿ ದಂಧೆ ಮಾಡುವುದರಲ್ಲಿ ಎಕ್ಸ್​​ಪರ್ಟ್​ ಎಂದು ಹೇಳಿದರು. ಇನ್ನು ವೈರಲ್ ಆದ ವೀಡಿಯೋ ಬಗ್ಗೆ ತನಿಖೆಯಾಗಬೇಕು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಏನು ಆದೇಶ ಮಾಡುತ್ತಾರೋ ಅದನ್ನು 100% ಫಾಲೋ ಮಾಡಲ್ಲ. ವರ್ಗಾವಣೆ ಮಾಡಬಾರದು ಅಂತಾ ಆದೇಶ ಮಾಡುತ್ತಾರೆ, ಆದರೆ ಸಾವಿರಾರು ವರ್ಗಾವಣೆ ಮಾಡಿದ್ದಾರೆ. ದಿನನಿತ್ಯ ಇದೇ ದಂಧೆ ಆಗಿಬಿಟ್ಟಿದೆ ಎಂದು ಆರ್.ಅಶೋಕ್ ಆರೋಪಿಸಿದರು. : – - - – - . - .