ಏಕದಿನ ವಿಶ್ವಕಪ್ ಸೆಮಿಫೈನಲ್: ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆರಂಭ ಮುಂಬೈ,ನವೆಂಬರ್,15,2023(..):ಏಕದಿನ ವಿಶ್ವಕಪ್ ​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡು ಬ್ಯಾಟಿಂಗ್ ಶುರುಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು. ಬ್ಯಾಟಿಂಗ್ ಆರಂಭವಾಗಿದ್ದು ರೋಹಿತ್ ಮತ್ತು ಶುಬ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಪ್ರಸ್ತುತ ಸ್ಕೋರ್ 5 ಓವರ್ ಗೆ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ಪಂದ್ಯದಲ್ಲಿ ಗೆಲುವು ಸಾಧಿಸಿದವರು ಫೈನಲ್ ಪ್ರವೇಶಿಸಲಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಉಭಯ ತಂಡಗಳು 117 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 59 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 50 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯ ಟೈನಲ್ಲಿ ಅಂತ್ಯಕಂಡರೆ, 7 ಮ್ಯಾಚ್​ಗಳು ಫಲಿತಾಂಶರಹಿತವಾಗಿತ್ತು. ತಂಡಗಳು ಹೀಗಿದೆ ಭಾರತ ತಂಡ ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್. ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್. : --- - – - .