ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ. ಮಂಗಳೂರು, ನವೆಂಬರ್,13,2023(..)ಹಾಸ್ಟೆಲ್‌ನ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್‌ ನಲ್ಲಿ ಈ ಘಟನೆ ನಡೆದಿದೆ ನಡೆದಿದೆ. ಪ್ರಕೃತಿ ಶೆಟ್ಟಿ(20) ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ. ಇಂದು ಮುಂಜಾನೆ 3 ಗಂಟೆಗೆ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. : - - – – -.