ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ. ಬೆಂಗಳೂರು,ನವೆಂಬರ್,13,2023(..):ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಮೇಲೆ ಬಿವೈ ವಿಜಯೇಂದ್ರ ಅವರು ಹಿರಿಯ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದು ಈ ನಡುವೆ ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾದರು. ಬೆಂಗಳೂರಿನ ಆರ್.ಟಿ ನಗರ ನಿವಾಸದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿಯಾದರು. ಈ ವೇಳೆ ಶಾಸಕ ಕೃಷ್ಣಪ್ಪ ಸಾಥ್ ನೀಡಿದರು. ಬಿವೈ ವಿಜಯೇಂದ್ರ ಬುಧವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಪದವಿ ಸ್ವೀಕಾರಕ್ಕೂ ಮುನ್ನ ಹಿರಿಯ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. : - –- - - - .