ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ತಂದೆ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವು. ರಾಮನಗರ,ನವೆಂಬರ್,13,2023(..):ಬೈಕ್ ​ಗೆ ಕೆಎಸ್​ ಆರ್​ಟಿಸಿ ಬಸ್​ ಡಿಕ್ಕಿಯಾಗಿ ತಂದೆ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೈಕ್ ​ನಲ್ಲಿದ್ದ ಸಿದ್ದಪ್ಪ(65), ಅರುಣ(23) ಮೃತಪಟ್ಟವರು. ರಸ್ತೆ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - - - – .