ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ. ಬೆಂಗಳೂರು,ನವೆಂಬರ್,15,2023(..):ರಾಜ್ಯ ಬಿಜೆಪಿಗೆ ನೂತನ ಸಾರಥಿ ಸಿಕ್ಕಿದ್ದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ಬಿವೈ ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದರು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ನಳಿನ್ ಕುಮಾರ್​ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್​, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿ ಹಲವರು ಭಾಗಿಯಾಗಿದ್ದರು. ಅಧಿಕಾರ ಸ್ವೀಕಾರ ಬಳಿಕ ತಂದೆ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ಬಿವೈ ವಿಜಯೇಂದ್ರ ನಮಸ್ಕರಿಸಿದರು. : .. – - - .