ಕೆಇಎ ಪರೀಕ್ಷೆ ಅಕ್ರಮ ಪ್ರಕರಣ : ಸಿಐಡಿ ತನಿಖೆಗೆ ಹಸ್ತಾಂತರ. ಬೆಂಗಳೂರು, ನವೆಂಬರ್,​​​​ 11,2023(..):ಕೆಇಎ ನಡೆಸಿದ ಎಫ್ ಡಿಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ತನಿಖೆಯನ್ನು ಗೃಹ ಇಲಾಖೆ ಸೂಚನೆ ಮೇರೆಗೆ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಈ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆಯ ಸೂಚನೆ ಮೇರೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ. ಕೆಇಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ​ ಆರ್​.ಡಿ ಪಾಟೀಲ್​ ನನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಆರ್ ಡಿ ಪಾಟೀಲ್ ನನ್ನು ಬಂಧಿಸಿದ್ದರು. : - - – -