ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್​; ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಚಿವ ದಿನೇಶ್ ಗುಂಡೂರಾವ್. ಹಾಸನ,ನವೆಂಬರ್,10,2023(..):ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ಶಾಕ್ ನಿಂದಾಗಿ ನೂಕು ನುಗ್ಗಲು ಉಂಟಾಗಿ ಕಾಲ್ತುಣಿತದಿಂದ ಗಾಯಗೊಂಡಿದ್ದವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಜಿಲ್ಲಾಸ್ಪತ್ರೆಯಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು ‘ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್​ ಹೊಡೆದಿದ್ದು ಸ್ಪಷ್ಟವಾಗಿದೆ. ಇದೇ ವೇಳೆ ನೂಕಾಟ ತಳ್ಳಾಟದ ವೇಳೆ ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ, ಸದ್ಯ ಆರೋಗ್ಯವಾಗಿದ್ದು, ಕರೆಂಟ್​ ಶಾಕ್​ನಿಂದ ಓರ್ವ ಯುವತಿ ಅಸ್ವಸ್ಥಗೊಂಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು. : – –- - - -