ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಕೆಳಗಿಳಿಸಲು ಷಡ್ಯಂತ್ರ- ಹೊಸಬಾಂಬ್ ಸಿಡಿಸಿದ ಬಿಜೆಪಿ ಶಾಸಕ ಯತ್ನಾಳ್. ವಿಜಯಪುರನವೆಂಬರ್,1,2023(..):ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ಬಾಳ್, ಸಚಿವರಾದ ಜಮೀರ್ ಅಹ್ಮದ್,​ ಎಂಬಿ ಪಾಟೀಲ್ ಮತ್ತು ಕೆಎನ್​ ರಾಜಣ್ಣ, ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್​ ಒಳಗಡೆಯೇ ಕುತಂತ್ರ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್ ​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದರು. ಐದು ಗ್ಯಾರಂಟಿ ಯೋಜನೆ ಜಾರಿ ಮಾಡುವುದಾಗಿ ಹೇಳಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರ ಈಗ ದಿವಾಳಿ ಆಗಿದೆ. ಯೋಜನೆಗಳನ್ನ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್​​ ಭವಿಷ್ಯ ನುಡಿದರು. ಆಪರೇಷನ್ ಕಮಲ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್​ ನೀಡಲಾಗುತ್ತಿದೆ ಎಂಬ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಆಫರ್​ ನೀಡಿದ ಬಗ್ಗೆ ವಿಡಿಯೋ, ಆಡಿಯೋ ಇದ್ದರೇ ಬಹಿರಂಗಪಡಸಲಿ. ಏನೇ ಆರೋಪ ಇದ್ದರೂ ಅದನ್ನು ಬಹಿರಂಗಪಡಿಸಬೇಕು. ಕಾಂಗ್ರೆಸ್​ನವರು ತಾವೇ ಜಗಳಾಡಿ ಹಾಳಾಗುವಾಗ ನಮ್ಮದೇನು ಕೆಲಸ ಎಂದು ಯತ್ನಾಳ್ ತಿರುಗೇಟು ನೀಡಿದರು. : – - – – - -