ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ. ಬೆಂಗಳೂರು,ನವೆಂಬರ್,1,2023(..):ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇದ್ದು ಇದೀಗ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ನಗರದ ಗಂಗಮ್ಮನಗುಡಿ ಈ ಘಟನೆ ಸಂಭವಿಸಿದೆ. ಸ್ಪಾಂಜ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಪಾಂಜ್ ತ್ಯಾಜ್ಯಕ್ಕೆ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ದಳ ವಾಹನ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಗಳಿಗೆ ಬೆಂಕಿ ತಗುಲಿ 19 ಬಸ್ ಗಳು ಬೆಂಕಿಗಾಹುತಿಯಾಗಿದ್ದವು. : - - –