ಹುಲಿ ಉಗುರು ಪ್ರಕರಣ: ನಟ ಹಾಗೂ ಸಂಸದ ಜಗ್ಗೇಶ್ ಗೆ ರಿಲೀಫ್ ನೀಡಿದ ಹೈಕೋರ್ಟ್ ಬೆಂಗಳೂರು,ಅಕ್ಟೋಬರ್,30,2023(..):ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಸಂಸದ ಜಗ್ಗೇಶ್ ಗೆ ರಿಲೀಫ್ ಸಿಕ್ಕಿದೆ. ನಟ ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ. ಹುಲಿ ಉಗುರು ಲಾಕೆಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ನಟ ಜಗ್ಗೇಶ್​ ಗೆ ನೋಟಿಸ್ ನೀಡಿದ್ದರು. ನೋಟಿಸ್ ನೀಡಿದ್ದನ್ನು ಪ್ರಶ್ನಿಸಿ ಇದಕ್ಕೆ ತಡೆ ನೀಡಬೇಕು ಎಂದು ಜಗ್ಗೇಶ್ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಇದೀಗ ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಜಗ್ಗೇಶ್​ ಅವರಿಗೆ ರಿಲೀಫ್ ಸಿಕ್ಕಂತೆ ಆಗಿದೆ. ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದ ಮೇಲೆ ವರ್ತೂರು ಸಂತೋಷ್ ಬಂಧನ ಬಳಿಕ ನಟ ಜಗ್ಗೇಶ್ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ವಿಡಿಯೋವೊಂದು ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ತಕ್ಷಣ ಅಧಿಕಾರಿಗಳು ಜಗ್ಗೇಶ್ ಅವರ ಮನೆಗೆ ಭೇಟಿ ನೀಡಿ ಶೋಧ ಕಾರ್ಯ ನಡೆಸಿ ನೋಟಿಸ್ ನೀಡಿದ್ದರು. : - – – –