ರಾಜ್ಯ ವಿಧಾನ ಪರಿಷತ್ ಚುನಾವಣೆ: ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್. ಮೈಸೂರು,ಅಕ್ಟೋಬರ್,30,2023(..):ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯರ ಆಯ್ಕೆ ಹಿನ್ನೆಲೆ, ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಸ್ಥಾನಕ್ಕೆ ಚುನಾವಣೆಗೆ ಕಾಂಗ್ರೆಸ್ ವರಿಷ್ಠ ಕೆ.ಸಿ ವೇಣುಗೋಪಾಲ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಹೆಸರುಗಳನ್ನ ಅಂತಿಮಗೊಳಿಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್, ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್, ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ ಬಿ.ಪಾಟೀಲ್ ಅವರ ಹೆಸರನ್ನ ಕೆಸಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ. : - - - - – .