ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ. ಚಿಕ್ಕಮಗಳೂರು,ಅಕ್ಟೋಬರ್,27,2023(..):ಮೂರು ದಿನಗಳಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ನವೆಂಬರ್ 4ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. : – – - – .