ಹುಲಿ ಉಗುರು ಪ್ರಕರಣ: ಯಾವುದೇ ಧರ್ಮಕ್ಕೆ ಸೇರಿದ್ರೂ ಕಾನೂನು ಒಂದೇ- ಗೃಹ ಸಚಿವ ಡಾ.ಜಿ.ಪರಮೇಶ್ವರ್. ಬೆಂಗಳೂರು,ಅಕ್ಟೋಬರ್,27,2023(..):ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ಚರ್ಚೆಯಾಗುತ್ತಿದ್ದು ಸೆಲಬ್ರಟಿಗಳು, ರಾಜಕಾರಣಿಗಳಿಗೂ ಸಂಕಷ್ಟ ತಂದೊಡ್ಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳ ಟಾರ್ಗೆಟ್ ಮಾಡಲಾಗ್ತಿದೆ’ ಎಂಬ ಅರವಿಂದ ಬೆಲ್ಲದ್ ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯಾವುದೇ ಧರ್ಮಕ್ಕೆ ಸೇರಿದರೂ ಕಾನೂನು ಒಂದೇ. ಕಾನೂನಿನಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಸಚಿವರೇ ಹೇಳಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ ಎಂದರು. : - –- – – -. . .