ಬಿಗ್’ಬಾಸ್ ಮನೆಯಿಂದ ವರ್ತೂರು ಸಂತೋಷ್ ಅರೆಸ್ಟ್ ?! ಬೆಂಗಳೂರು, ಅಕ್ಟೋಬರ್ 23, 2023 (..):ಕನ್ನಡ ರಿಯಾಲಿಟಿ ಶೋ ‘ಬಿಗ್​ಬಾಸ್’ ಮನೆಯಲ್ಲಿರುವ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ ಎನ್ನಲಾಗಿದೆ. ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ವಿದ್ದು ಅವರ ವಿರುದ್ದ ಯೊಬ್ಬರು ಎಫ್​ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಅಧಿಕಾರಿಗಳು ಬಿಗ್‌ ಬಾಸ್‌ ಮನೆಯಿಂದಲೇ ಬಂಧಿಸಿ ಸದ್ಯ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಮೂಲಕ ಬಿಗ್‌ ಬಾಸ್‌ ಕಾರ್ಯಕ್ರಮದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್‌ ಬಾಸ್‌ಮನೆಯಿಂದ ಓರ್ವ ಸ್ಪರ್ಧಿಯನ್ನು ಬಂಧಿಸಿರುವ ಘಟನೆ ನಡೆದಿದೆ.