ಎಟಿಎಂ ಸರ್ಕಾರ ಎಂದು ಪೋಸ್ಟರ್ ಬಿಡುಗಡೆ ಮಾಡಿದ್ದ ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು. ಬೆಂಗಳೂರು,ಅಕ್ಟೋಬರ್, 20,2023(..):ಎಟಿಎಂ ಸರ್ಕಾರ, ಭ‍್ರಷ್ಟಾಚಾರದ ದರ್ಬಾರ್ ಎಂದು ಪೋಸ್ಟರ್ ರಿಲೀಸ್ ಮಾಡಿದ್ದ ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಎಲ್ಲಾ ಎಟಿಎಂ ಅವರದ್ದೇ. ಜನ ತೀರ್ಪು ಕೊಟ್ಟಿದ್ದಾರೆ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ರಾಜ್ಯದ ಜನತೆ ಬಿಜೆಪಿ ತಿರಸ್ಕರಿಸಿದ್ದಾರೆ. ಬಿಜೆಪಿ ಮುಖಂಡರು, ನಾಯಕರು ಕಾಂಗ್ರೆಸ್​ ಪಕ್ಷಕ್ಕೆ ಸೇರುತ್ತಿದ್ದಾರೆ. ಹಾಗಾಗಿ ಬಿಜೆಪಿಯವರು ಇಂತಹ ಆರೋಪ ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು. : - – – - – .