ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್. ಬೆಂಗಳೂರು,ಅಕ್ಟೋಬರ್,20,2023(..):ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​​ ಇಂದು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ​​ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ಜಯಚಂದ್ರ ಉಪಸ್ಥಿತರಿದ್ದರು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. : - --