ಹುಕ್ಕಾ ಕೆಫೆಯಲ್ಲಿ ಅಗ್ನಿ ಅವಘಡ: ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಯುವಕ. ಬೆಂಗಳೂರುಅಕ್ಟೋಬರ್,18,2023(..):ಹುಕ್ಕಾ ಕೆಫೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಪ್ರಾಣ ಉಳಿಸಿಕೊಳ್ಳಲು ಯುವಕನೋರ್ವ 4ನೇ ಮಹಡಿ ಕಟ್ಟಡದಿಂದ ಜಿಗಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. 4ನೇ ಮಹಡಿಯಲ್ಲಿದ್ದ ಮಡ್ ಪೈಪ್ ಹುಕ್ಕಾ ಕೆಫೆನಲ್ಲಿದ್ದ ಕಟ್ಟಡದಲ್ಲಿದ್ದ ಸಿಲಿಂಡರ್ ​ಗಳು ಸ್ಫೋಟಗೊಂಡಿದೆ ಎನ್ನಲಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಕ್ಷಣಾರ್ಧದಲ್ಲಿ ಇಡೀ ಕೆಫೆ ಆಹುತಿಯಾಗಿದೆ. ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ನಾಲ್ಕನೇ ಮಹಡಿಯ ಕೆಳಭಾಗಕ್ಕೂ ಬೆಂಕಿ ಆವರಿಸಿದ್ದು, ಐಷಾರಾಮಿ ಕಾರು,ಬೈಕ್ ಗಳು ಬೆಂಕಿಗಾಹುತಿಯಾಗಿವೆ. ಪ್ರಾಣ ಉಳಿಸಿಕೊಳ್ಳಲು ಪ್ರೇಮ್​ ಎಂಬುವರು ನಾಲ್ಕನೇ ಮಹಡಿಯಿಂದ ಗಿಡದ ಮೇಲೆ ಜಿಗಿದಿದ್ದಾರೆ. ಅವರಿಗೆ ಗಂಭೀರ ಗಾಯಗಳಾಗಿದ್ದು, ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಕ್ಕದ ಕಟ್ಟಡಕ್ಕೂ ಬೆಂಕಿ ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಾಲ್ಕು ಮಹಡಿಯ ​ಕಟ್ಟಡದಲ್ಲಿ, ಗ್ರೌಂಡ್ ಮತ್ತು ಮೊದಲ ಮಹಡಿಯಲ್ಲಿ ಕಾರು ಷೋ ರೂಂ ಇದೆ. ಎರಡು ಮತ್ತು ಮೂರನೇ ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿದೆ. ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. : - -- – – -