ಐಟಿ ದಾಳಿ ವೇಳೆ ಪತ್ತೆಯಾದ ಹಣ ಕಾಂಗ್ರೆಸ್ ನಾಯಕರದ್ದು: ಸಿಬಿಐ ತನಿಖೆಗೆ ವಹಿಸಿ- ಮಾಜಿ ಸಚಿವ ಆರ್.ಅಶೋಕ್. ಬೆಂಗಳೂರು,ಅಕ್ಟೋಬರ್,17,2023(..):ಐಟಿ ದಾಳಿ ವೇಳೆ ಪತ್ತೆಯಾದ ಹಣ ಕಾಂಗ್ರೆಸ್ ನಾಯಕರಿಗೆ ಸೇರಿದ್ದಾಗಿದೆ. ಈ ಸಂಬಂಧ ಸಿಬಿಐ ತನಿಖೆಗೆ ವಹಿಸಿ ಎಂದು ಮಾಜಿ ಸಚಿವ ಆರ್.ಅಶೋಕ್ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಎರಡು ರಾಜ್ಯಗಳ ಚುನಾವಣೆಗೆ ಇಲ್ಲಿಂದ ಹಣ ಕಳಿಸಿದೆ. ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರವಾಗಿದ್ದು, ರಾಜ್ಯದಲ್ಲಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ಐಟಿ ದಾಳಿ ವೇಳೆ ಪತ್ತೆಯಾದ ಹಣ ಕಾಂಗ್ರೆಸ್ ಗೆ ಸೇರಿದ್ದು. ಹೀಗಾಗಿ ಹಣದ ಮೂಲದ ತನಿಖೆಯನ್ನ ಸಿಬಿಐಗೆ ವಹಿಸಬೇಕು. ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ಆರ್.ಅಶೋಕ್ ಒತ್ತಾಯಿಸಿದರು. : - – - -- - . .