ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್​ ಗೆ 1000 ಕೋಟಿ ರೂ. ಟಾರ್ಗೆಟ್: ಯಾವ ರಾಜ್ಯಕ್ಕೆ ಎಷ್ಟು? ಟ್ವಿಟ್ಟರ್ ನಲ್ಲಿ ಕುಟುಕಿದ ಬಿಜೆಪಿ. ಬೆಂಗಳೂರು,ಅಕ್ಟೋಬರ್,16,2023(..):ಪಂಚರಾಜ್ಯ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ ​ಗೆ ಹೈಕಮಾಂಡ್ 1000 ಕೋಟಿ ರೂ. ಟಾರ್ಗೆಟ್ ನೀಡಿದೆ ಎಂದು ಕಾಂಗ್ರೆಸ್ ವಿರುದ್ಧ ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ಪಂಚರಾಜ್ಯಗಳ ಚುನಾವಣೆಗೆ ‘ಕೈ’​ ಹೈಕಮಾಂಡ್ ಟಾರ್ಗೆಟ್ ನೀಡಿದೆ ಮೊದಲನೇ ಹಂತದ 1000 ಕೋಟಿ ಟಾರ್ಗೆಟ್ ಯಾವ ರಾಜ್ಯಕ್ಕೆ ಎಷ್ಟು? ಎಂದು ಟ್ವೀಟ್ ಮೂಲಕ ಕಾಂಗ್ರೆಸ್​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ✔ ತೆಲಂಗಾಣ ಕಾಂಗ್ರೆಸ್‌ ಗೆ ₹300 ಕೋಟಿ ✔ ಮಿಜೋರಾಂ ಕಾಂಗ್ರೆಸ್‌ ಗೆ ₹100 ಕೋಟಿ ✔ ಛತ್ತಿಸ್‌ಗಢ‌ ಕಾಂಗ್ರೆಸ್‌ ಗೆ ₹200 ಕೋಟಿ ✔ ರಾಜಸ್ಥಾನ‌ ಕಾಂಗ್ರೆಸ್‌ ಗೆ ₹200 ಕೋಟಿ ✔ ಮಧ್ಯಪ್ರದೇಶ‌ ಕಾಂಗ್ರೆಸ್‌ ಗೆ ₹200 ಕೋಟಿ ಕಮಿಷನ್, ಕಲೆಕ್ಷನ್ ಮೂಲಕ ಸಾವಿರ ಕೋಟಿ ಟಾರ್ಗೆಟ್ ಮಾಡಿ ಸಂಗ್ರಹಿಸುತ್ತಿರುವ ಕಾಂಗ್ರೆಸ್ ಹಣ ಹಂಚುವ ಮುನ್ನವೇ ಸಿಕ್ಕಿ ಬಿದ್ದಿದೆ ಎಂದು ರಾಜ್ಯ ಬಿಜೆಪಿ ಘಟಕ ಟಾಂಗ್ ನೀಡಿದೆ. : 1000 – - – -- .