ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನೋಟಿಸ್. ನವದೆಹಲಿ,ಅಕ್ಟೋಬರ್ 16,2023(..):ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ತಡೆ ತೆರವು ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕರ್ನಾಟಕ ಡಿಸಿಎಂ ​ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ತರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್​ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ತಡೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಡಿಸಿಎಂ ಡಿಕೆ ಶಿವಕುಮಾರ್ ​ಗೆ ನೋಟಿಸ್ ನೀಡಿದೆ. ವಿಚಾರಣೆಯನ್ನ ನವೆಂಬರ್ 7 ಕ್ಕೆ ಮುಂದೂಡಿದೆ. ಡಿಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಮತ್ತೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಬಳಿಕ ಸಿಬಿಐ ಹೈಕೋರ್ಟ್ ​ನ ಮಧ್ಯಂತರ ತಡೆ ತೆರವು ಕೋರಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಈ ಬಗ್ಗೆ ಅಭಿಪ್ರಾಯ ಕೇಳಿ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿದೆ. : - - – - .