ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾದ: ಸ್ಥಳದಲ್ಲೇ ಐವರು ಸಾವು. ಗದಗ,ಅಕ್ಟೋಬರ್,16,2023(..):ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದ್ದು, ಟಾಟಾ ಸುಮೋದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮೃತರು ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು . ಬಾಲೆ ಹೊಸೂರ ಮಠಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : - - – -