ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ: ಅರಮನೆ ನಗರಿಯಲ್ಲಿ ಸಕಲ ಸಿದ್ಧತೆ ಮೈಸೂರು, ಅಕ್ಟೋಬರ್ 15, 2023(..):ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಗಲಿದೆ.416ನೇ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಬೆಳಗ್ಗೆ 10:15ರಿಂದ 10.36ರವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾಡಹಬ್ಬ ಉದ್ಘಾಟನೆ ಮಾಡಲಾಗುತ್ತದೆ.ಚಾಮುಂಡಿ ಬೆಟ್ಟದಲ್ಲಿ ನಾದ ಬ್ರಹ್ಮ ಹಂಸಲೇಖರಿಂದ ದಸರೆಗೆ ಚಾಲನೆ ಸಿಗಲಿದೆ. ನಾಡ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ಸಿಗಲಿದೆ. ಇಂದಿನ ದಸರಾ ಮಹೋತ್ಸವದ ಕಾರ್ಯಕ್ರಮಗಳು. *ಬೆಳಿಗ್ಗೆ 11:30ಕ್ಕೆ ಸಚಿವ ಡಾ. ಡಾ.ಎಚ್.ಸಿ ಮಹದೇವಪ್ಪ ಅವರಿಂದ ಕಲಾಮಂದಿರದಲ್ಲಿ ಚಲನ ಚಿತ್ರೋತ್ಸವ ಉದ್ಘಾಟನೆ. * 12:30 ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಲಿರುವ ಸಚಿವ ಹೆಚ್.ಸಿ. ಮಹದೇವಪ್ಪ.* ಮಧ್ಯಾಹ್ನ 1 ಗಂಟೆಗೆ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಆಹಾರ ಮೇಳ ಉದ್ಘಾಟನೆ. * ಸಂಜೆ 4 ಗಂಟೆಗೆ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ. * ಸಂಜೆ 4:30ಕ್ಕೆ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಿರುವ ಸಿಎಂ. * ಸಂಜೆ 5 ಗಂಟೆಗೆ ಸೆನೆಟ್ ಭವನದಲ್ಲಿ ಯೋಗ ದಸರಾ ಉದ್ಘಾಟನೆ ಮಾಡಲಿರುವ ಸಚಿವ ಡಾ. ಹೆಚ್.ಸಿ ಮಹದೇವಪ್ಪ. * 5 ಗಂಟೆಗೆ ಕಲಾಮಂದಿರದಲ್ಲಿ ಅಖಿಲ ಭಾರತ ಹಾಗೂ ರಾಜ್ಯ ಮಟ್ಟದ ಚಿತ್ರ ಶಿಲ್ಪ ಕಲಾ ಪ್ರದರ್ಶನ ಉದ್ಘಾಟನೆ.ಸಚಿವ ಶಿವರಾಜ್ ತಂಗಡಗಿ ಯಿಂದ ಉದ್ಘಾಟನೆ. * 5 ಗಂಟೆಗೆ ಓವಲ್ ಮೈದಾನದಲ್ಲಿ ಪುಸ್ತಕ ಮಾರಾಟ ಮೇಳ ಹಾಗೂ 5:30 ಕ್ಕೆ ಕಲಾಮಂದಿರದ ರಂಗಾಯಣದಲ್ಲಿ ನವರಾತ್ರಿ ರಂಗೋತ್ಸವ ಉದ್ಘಾಟನೆ ಮಾಡಲಿರುವ ಸಚಿವ ಶಿವರಾಜ್ ತಂಗಡಗಿ. *ಸಂಜೆ 6:30ಕ್ಕೆ ವಿದ್ಯುತ್ ದೀಪಾಲಂಕಾರ ಕಾರ್ಯಕ್ರಮ ಉದ್ಘಾಟನೆ ಮಾಡಲಿರುವ ಇಂಧನ ಸಚಿವ ಕೆ.ಜೆ ಜಾರ್ಜ್. * ಸಂಜೆ 7 ಗಂಟೆಗೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ.