ಶೀಘ್ರದಲ್ಲೇ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಸಿಎಂ ಸಿದ್ಧರಾಮಯ್ಯ ಭರವಸೆ- ಕೆಂಪಣ್ಣ ಬೆಂಗಳೂರು,ಅಕ್ಟೋಬರ್,14,2023(..):ಶೀಘ್ರದಲ್ಲೇ ಗುತ್ತಿಗೆದಾರರ ಬಾಕಿ ಹಣವನ್ನ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ. ಇಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಬಾಕಿ ಬಿಲ್​​ ಬಿಲ್​​ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೆಂಪಣ್ಣ ಅವರು, ಐದುವರೆ ತಿಂಗಳಿಂದ ಬಾಕಿ ಇರುವ ಬಿಲ್​ ಬಿಡುಗಡೆ ಮಾಡಿಲ್ಲ. ಇದರಿಂದ ನಮಗೆ ಸಾಕಷ್ಟು ತೊಂದರೆಯಾಗಿದೆ. ಆದಷ್ಟು ಬೇಗ ಬಗೆಹರಿಸುತ್ತೇವೆ ಅಂತ ಹೇಳಿದ್ದಾರೆ. ತಕ್ಷಣ ಹಣ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದ್ದಾರೆ. ಆದರೆ ಎಷ್ಟು ಅಂತ ಹೇಳಿಲ್ಲ ಎಂದರು. ಮಾಜಿ ಸಿಎಂ ಹೆಚ್ ​ಡಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪದ ಬಗ್ಗೆ ನಮಗೆ ಮಾಹಿತಿ ಇಲ್ಲ. ಹೆಚ್​ ಡಿ ಕುಮಾರಸ್ವಾಮಿ ಅವರ ಹೇಳಿಕೆಗೂ ನಮಗೂ ಸಂಬಂಧ ಇಲ್ಲ. ಹೋರಾಟ ವಾಪಸ್ ತಗೊಳ್ಳುವುದಿಲ್ಲ. ಹಣ ಬಿಡುಗಡೆ ಆಗುವ ತನಕ ಹೋರಟ ಮಾಡುತ್ತೇವೆ. 22 ಸಾವಿರ ಕೋಟಿ ರೂ. ಹಣ ಬಿಡುಗಡೆ ಆಗಬೇಕಿದೆ ಎಂದರು. : - – – ---