ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್: ಸರ್ಕಾರದ ವಿರುದ್ಧ ಶಾಸಕ ಜಿ.ಟಿ ದೇವೇಗೌಡ ವಾಗ್ದಾಳಿ. ಧಾರವಾಡ,ಅಕ್ಟೋಬರ್,13,2023(..):ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ ಶುರುವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಶಾಸಕ ಜಿ.ಟಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಜಿ.ಟಿ ದೇವೇಗೌಡ, ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ ಇದೆ. ಯಾವ ರಾಜ್ಯದಲ್ಲೂ ವಿದ್ಯುತ್ ಸಮಸ್ಯೆಯಾಗಿಲ್ಲ. ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆಯಾಗಿದೆ. ಸರ್ಕಾರ ಅನ್ನದಾತರ ಹೊಟ್ಟೆ ಮೇಲೆ ಹೊಡೆದಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಜಲಾಶಯಗಳು ಭರ್ತಿಯಾಗದೇ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಪರಿಸ್ಥಿತಿ ಉಂಟಾಗಿದೆ. ಸರಿಯಾಗಿ ಮಳೆಯಾಗದ ಹಿನ್ನೆಲೆ ವಿದ್ಯುತ್‌ ಉತ್ಪಾದನೆ ಮೇಲೂ ಪರಿಣಾಮ ಬೀರಿದೆ. ಇದರಿಂದಾಗಿ ವಿದ್ಯುತ್ ಕೊರತೆ ಮುಂದುವರೆದಿದೆ. : – - – .