ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ: ಡಿ.3 ರಂದು ಫಲಿತಾಂಶ. ನವದೆಹಲಿ,ಅಕ್ಟೋಬರ್,9,2023(..):ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಹಾಗೂ ಮಿಜೋರಾಂ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಇಂದು ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌, ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕವನ್ನ ಘೋಷಿಸಿದ್ದಾರೆ. ನವೆಂಬರ್‌ 7 ರಂದು ಮಿಜೋರಾಂ ಚುನಾವಣೆ ನಡೆಯಲಿದೆ, ಛತ್ತೀಸ್‌ ಗಢದಲ್ಲಿ 2 ಹಂತದಲ್ಲಿ ನವೆಂಬರ್‌ 7 ಹಾಗೂ 17 ರಂದು ನಡೆದರೇ, ಮಧ್ಯಪ್ರದೇಶದಲ್ಲಿ ಒಂದೇ ಹಂತದಲ್ಲಿ 230 ಕ್ಷೇತ್ರಗಳಿಗೆ ನವೆಂಬರ್‌ 17ರಂದು ಮತದಾನ ನಡೆಯಲಿದೆ. ರಾಜಸ್ಥಾನದಲ್ಲಿ ನವೆಂಬರ್ 23 ರಂದು ಮತದಾನ ನಡೆಯಲಿದೆ. ತೆಲಂಗಾಣದಲ್ಲಿ ನವೆಂಬರ್‌ 30 ರಂದು ಮತದಾನ ನಡೆಯಲಿದ್ದು, ಈ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್‌ 3 ರಂದು ಪ್ರಕಟವಾಗಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದರು. ಈ ಐದೂ ರಾಜ್ಯಗಳಲ್ಲಿ 16.14 ಕೋಟಿ ಮತದಾರರು ಇದ್ದಾರೆ. ಮಿಜೋರಾಮ್‌ನಲ್ಲಿ 8.52 ಲಕ್ಷ, ಛತ್ತೀಸ್‌ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಹಾಗೂ ತೆಲಂಗಾಣದಲ್ಲಿ 3.17 ಕೋಟಿ ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. : - – –- –