ಜಾತಿಗಣತಿ ವರದಿ ಬಿಡುಗಡೆ ಮಾಡಿದರೇ ಕೋಲಾಹಲ ಉಂಟಾಗುತ್ತೆ-ಸರ್ಕಾರದ ವಿರುದ್ಧ ಮಾಜಿ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ. ಚಿಕ್ಕಬಳ್ಳಾಪುರ, ಅಕ್ಟೋಬರ್,9,2023(..):ಯಾವ ಉದ್ದೇಶಕ್ಕೆ ಜಾತಿಗಣತಿ ಮಾಡಿದ್ದಾರೆ ಎಂದು ಗೊತ್ತಿದೆ. ಜಾತಿಗಣತಿ ವರದಿ ಬಿಡುಗಡೆ ಮಾಡಿದರೇ ಕೋಲಾಹಲ ಉಂಟಾಗುತ್ತದೆ ಎಂದು ಮಾಜಿ ಸಚಿವ ಡಾ.ಕೆ .ಸುಧಾಕರ್ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೇವಲ 5 ತಿಂಗಳಲ್ಲಿ ಸರ್ಕಾರ ಜನ ವಿರೋಧಿಯಾಗಿದೆ. ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ ಸಿಎಂ ಸಿದ್ಧರಾಮಯ್ಯ ಅಧಿಕಾರದ ದರ್ಪದಲ್ಲಿ ಮೆರೆಯುತ್ತಿದ್ದಾರೆ. ರಾಜ್ಯ ಸರ್ಕಾರ ತೆರಿಗೆ ಹಣವನ್ನ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ರೈತರ ಬದುಕಿಗೆ ಗ್ಯಾರಂಟಿ ಇಲ್ಲ. ಕೆಲವು ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ. ಪಂಜಾಬ್ ಈಗಾಗಲೇ ದಿವಳಿಯಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಲ್ಲಿ ನಿದ್ದೆಗೆ ಹೋಗಿದ್ದಾರೆ. ಸಿದ್ಧರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನ ಉತ್ತರ ಕೊಡಲಿದ್ದಾರೆ ಎಂದು ಹರಿಹಾಯ್ದರು. : - – - - . .