ಕೆಎಸ್ ​ಆರ್ ​ಟಿಸಿ ಪಲ್ಲಕ್ಕಿ ಬಸ್ ​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ. ಬೆಂಗಳೂರು,ಅಕ್ಟೋಬರ್,7,2023(..):ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕೆಎಸ್​ ಆರ್​ ಟಿಸಿ ಪಲ್ಲಕ್ಕಿ ಬಸ್​ಗಳನ್ನ ಲೋಕಾರ್ಪಣೆ ಮಾಡಿದರು. ಪಲ್ಲಕ್ಕಿ ಉತ್ಸವ ಹೆಸರಿನ 40 ನಾನ್ ಎಸಿ ಸ್ಲೀಪರ್ ಬಸ್​ಗೆ ಗ್ರೀನ್ ಸಿಗ್ನಲ್ ನೀಡಲಾಯತು. ಒಟ್ಟು 148 ಬಸ್​ಗಳಿಗೆ ಚಾಲನೆ ನೀಡಲಾಗಿದ್ದು 148 ಬಸ್ಸುಗಳ ಪೈಕಿ 100 ಬಸ್​ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, 44 ಎಸಿ ಸ್ಲೀಪರ್ ​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. 4 ನಾನ್​ ಎಸಿ ಸ್ಲೀಪರ್​ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಪಸ್ಥಿತರಿದ್ದರು. : - – - .