ಗೌರಿ ಗಣೇಶ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಬೆಂಗಳೂರು,ಸೆಪ್ಟಂಬರ್,5,2024 (..):ರಾಜ್ಯ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್, ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದೆ. ನಾಲ್ಕೈದು ದಿನಗಳಲ್ಲಿ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದರು. : , ,