ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರರಿಂದ ಸ್ಧಳ ಪರಿಶೀಲನೆ ಮೈಸೂರು,ಅಕ್ಟೋಬರ್,6,2023(..):ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಏರ್ ಶೋ ನಡೆಸುವ ಸ್ಧಳ ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು. : - - -