ಉಸಿರುಗಟ್ಟುವ ವಾತಾವರಣವಿದ್ದರೇ ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಲಿ- ಎಸ್.ಟಿ ಸೋಮಶೇಖರ್ ಗೆ ಕೆ.ಎಸ್ ಈಶ್ವರಪ್ಪ ಟಾಂಗ್. ಶಿವಮೊಗ್ಗ,ಅಕ್ಟೋಬರ್,5,2023(..):ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ಹೇಳಿಕೆ ನೀಡಿದ್ದ ಶಾಸಕ ಎಸ್.ಟಿ ಸೋಮಶೇಖರ್ ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಬಿಜೆಪಿಯಲ್ಲಿ ಆನಂದವಾಗಿದ್ದರೆ ಇಲ್ಲೇ ಇರಲಿ. ಇಲ್ಲ ಉಸಿರುಗಟ್ಟುವ ವಾತಾವರಣವಿದ್ದರೇ ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಲಿ ಎಂದು ತಿರುಗೇಟು ನೀಡಿದರು. ಮೈತ್ರಿ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಿದೆ. ಹೈಕಮಾಂಡ್ ನಿರ್ಧಾರ ವಿರೋಧಿಸಿಲು ಆಗಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ‍ಬದ‍್ಧರಾಗಿರಬೇಕು ಎಂದು ಕೆಎಸ್ ಈಶ್ವರಪ್ಪ ತಿಳಿಸಿದರು. : --- -