ಶಿವಮೊಗ್ಗ ಗಲಾಟೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಿಜೆಪಿ ನಿಯೋಗ. ಶಿವಮೊಗ್ಗ, ಅಕ್ಟೋಬರ್,5,2023(..):ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನೆಗಿಳಿದಿರುವ ಬಿಜೆಪಿ ಇಂದು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗ ಇಂದು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಲಾಟೆ ವೇಳೆ ಕಲ್ಲು ತೂರಾಟದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನ ವಿಚಾರಿಸಿತು. ಈ ವೇಳೆ ಮಾಜಿ ಸಚಿವರಾದ ಅಶ್ವಥ್ ನಾರಾಯಣ್, ಕೆ.ಎಸ್ ಈಶ್ವರಪ್ಪ, ಅರಗ ಜ್ಞಾನೇಂದ್ರ, ಸಂಸದ ಬಿವೈ ರಾಘವೇಂದ್ರ, ಶಾಸಕ ಚನ್ನಬಸಪ್ಪ ಉಪಸ್ಥಿತರಿದ್ದರು. ಗಾಯಾಳುಗಳಿಂದ ಮಾಹಿತಿ ಕಲೆ ಹಾಕಿದರು. ಮೆಗ್ಗಾನ್ ಆಸ್ಪತ್ರೆ ಭೇಟಿ ಬಳಿಕ ಬಿಜೆಪಿ ಸತ್ಯಶೋಧನಾ ಸಮಿತಿ ರಾಗಿಗುಡ್ಡದಲ್ಲಿ ಕಲ್ಲು ತೂರಾಟವಾಗಿರುವ ಮನೆಗಳಿಗೆ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡದಲ್ಲಿ ಪೊಲೀಸ್ ಭದ್ರತೆ ವಹಿಸಲಾಗಿದೆ. : - –- - -