ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಡಿ.ಕೆ ಶಿವಕುಮಾರ್ ಆಪ್ತರೊಬ್ಬರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ. ಶಿವಮೊಗ್ಗ,ಅಕ್ಟೋಬರ್ ,5,2023(..):ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ ಮಂಜುನಾಥಗೌಡರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಇಂದುಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ. ಆರ್ ಎಂ ಮಂಜುನಾಥ್ ಗೌಡ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಆಪ್ತ ಎಂದು ಹೇಳಲಾಗುತ್ತಿದೆ. ಆರ್ ಎಂ ಮಂಜುನಾಥ್ ಗೌಡ ಸಂಬಂಧಿ ಉಷಾ ಅವರ ನಿವಾಸದಲ್ಲೂ ಇಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ. : - - – - –