ಶಾಮನೂರು ಶಿವಶಂಕರಪ್ಪ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯ- ಮಾಜಿ ಸಚಿವ ಬಿ.ಸಿ ಪಾಟೀಲ್. ಬೆಂಗಳೂರು,ಅಕ್ಟೋಬರ್,2,2023(..):ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು ಇದೀಗ ಮತ್ತೆ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ. ಇನ್ನು ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಸಚಿವ ಬಿ.ಸಿ ಪಾಟೀಲ್, ಶಾಮನೂರು ಶಿವಶಂಕರಪ್ಪ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯ ಎಂದಿದ್ದಾರೆ. ಲಿಂಗಾಯತ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಸ್ಥಾನ ಇಲ್ಲ. ಓರ್ವ ಐಪಿಎಸ್​ ಅಧಿಕಾರಿಗೆ ಮಾತ್ರ ಬೆಂಗಳೂರು ನಗರದಲ್ಲಿ ಸ್ಥಾನ ಸಿಕ್ಕಿದೆ. ಐಎಎಸ್ ಅಧಿಕಾರಿಗಳಿಗಂತೂ ಬೆಂಗಳೂರು ನಗರದಲ್ಲಿ ಸ್ಥಾನವೇ ಇಲ್ಲ. ಕಾಂಗ್ರೆಸ್ ಸರ್ಕಾರ ಲಿಂಗಾಯತರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ ಎಂದು ಸಿಎಂ, ಡಿಸಿಎಂಗೆ ಟ್ಯಾಗ್ ಮಾಡಿ ಮಾಜಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.​​ : - 100% – - .