ಕೆಆರ್ ಎಸ್ ಜಲಾಶಯದ ಒಳಹರಿವಿನ ಪ್ರಮಾಣ ಕೊಂಚ ಏರಿಕೆ. ಮಂಡ್ಯ,ಅಕ್ಟೋಬರ್,3,2023(..):ಕಾವೇರಿ ನದಿ ವ್ಯಾಪ್ತಿಯಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾದ ಹಿನ್ನೆಲೆ ಇದೀಗ ಕೆಆರ್ ಎಸ್ ಜಲಾಶಯದ ಒಳಹರಿವಿನ ಪ್ರಮಾಣ ಕೊಂಚ ಏರಿಕೆಯಾಗಿದೆ. ಕೆಆರ್​ಎಸ್​ ಜಲಾಶಯಕ್ಕೆ 11,800 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೃಷ್ಣರಾಜಸಾಗರ ಜಲಾಶಯದ ಇಂದಿನ ನೀರಿನ ಮಟ್ಟ 99.54 ಅಡಿ ಇದೆ. ಕೆಆರ್​ಎಸ್​ ಜಲಾಶಯದ ಗರಿಷ್ಠಮಟ್ಟ 124.80 ಅಡಿ ಇದ್ದು, 11,800 ಕ್ಯೂಸೆಕ್ ಒಳಹರಿವಿದ್ದು, 1,592 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಇನ್ನು ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದೆ. : -- – -