ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ- ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ. ಬೆಂಗಳೂರು, ಅಕ್ಟೋಬರ್​,2,2023(..):ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಗಲಾಟೆ ಪ್ರಕರಣದ ಹಿಂದೆ ಓಲೈಕೆ ರಾಜಕಾರಣ ಇದೆ. ಸರ್ಕಾರ ಲಾಠಿಚಾರ್ಜ್​ ನಡೆಸುವಂತಹ ಪರಿಸ್ಥಿತಿಗೆ ಬರಬಾರದಾಗಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಶಿವಮೊಗ್ಗ ಸೂಕ್ಷ್ಮ ನಗರ, ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಧಾರ್ಮಿಕ ಕಾರ್ಯಕ್ರಮಗಳ ವೇಳೆ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಶಿವಮೊಗ್ಗ ನಗರ 3 ಠಾಣಾ ವ್ಯಾಪ್ತಿಗಳು ಸೂಕ್ಷ್ಮ ಪ್ರದೇಶಗಳಾಗಿವೆ, ಈ ಠಾಣೆಗಳಿಗೆ ಸಮರ್ಥ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಬೇಕು. ಇಲ್ಲದವಾದರೆ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತೆ. ಜಿಲ್ಲೆಗಳಲ್ಲಿ ಕ್ಲಬ್​ಗಳು, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಬೊಮ್ಮಾಯಿ ಹೇಳಿದರು. : – – - - -