ಸಿದ್ದರಾಮಯ್ಯ ಪರ ಹೈಕಮಾಂಡ್: ಸಿಎಂ ಕೆಳಗಿಳಿಸುವ ಪ್ರಶ್ನೆಯೇ ಇಲ್ಲ- ಸಚಿವ ಬೋಸರಾಜು ಬೆಂಗಳೂರು,ಸೆಪ್ಟಂಬರ್,4,2024 (..):ಮುಡಾ ಹಗರಣಕ್ಕೆ ಸಿಲುಕಿರುವ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸುತ್ತಿದ್ದರೆ, ಇತ್ತ ಸಿಎಂ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆ ಈ ಬಗ್ಗೆ ಸಚಿವ ಬೋಸರಾಜು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಬೋಸರಾಜು, ಸಿದ್ದರಾಮಯ್ಯ ಪರ ಹೈಕಮಾಂಡ್ ನಿಂತಿದೆ. 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಹೀಗಾಗಿ ಸಿದ್ಧರಾಮಯ್ಯರನ್ನು ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಸಿಎಂ ಕುರ್ಚಿ ಬಗ್ಗೆ ಮಾತಾನಾಡುವವರು ನಮ್ಮ ಪಕ್ಷದಲ್ಲಿ ಇಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಾಯಕತ್ವ ಇದೆ. ಹೈಕಮಾಂಡ್ ಹಾಗೂ ಸಚಿವರು ಕೂಡ ಸಿದ್ದರಾಮಯ್ಯ ಹಾಗೂ ಡಿಕೆಶಿ ಪರವೇ ಇದೆ ಎಂದರು. : , , , ,