ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಕೆ- ಪೊಲೀಸ್ ಆಯುಕ್ತ ದಯಾನಂದ್ ಬೆಂಗಳೂರು,ಸೆಪ್ಟಂಬರ್,4,2024 (..):ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಸೇರಿ 17 ಆರೋಪಿಗಳ ವಿರುದ್ದ ಪೊಲೀಸರು ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಕೆ ಮಾಡಿದ್ದು ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಪೊಲೀಸ್ ಕಮಿಷನರ್ ಬಿ.ದಯಾನಂದ್, ಪ್ರ ಕರಣ ತನಿಖೆ ಸಂಪೂರ್ಣವಾಗಿ ಮುಗಿದಿದೆ. ಇಂದು ಅಂತಿಮ ವರದಿ ಸಲ್ಲಿಕೆ ಮಾಡಿದ್ದೇವೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ ಸಿಆರ್ ಪಿಸಿ 173(8)ಅಡಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪ್ರಕರಣ ಸಂಬಂಧ 17 ಮಂದಿ ಆರೋಪಿಗಳನ್ನ ಬಂದಿಸಲಾಗಿದೆ. ಸಿಎಫ್ ಎಲ್ ವರದಿಗಳು ಬಂದಿವೆ. ಕೆಲ ಸಿಎಫ್ಎಸ್ ಎಲ್ ವರದಿ ಬರಬೇಕಿದೆ ಎಂದು ದಯಾನಂದ್ ತಿಳಿಸಿದ್ದಾರೆ. : , , , ,