ನೂರಕ್ಕೆ ನೂರರಷ್ಟು ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿರುತ್ತೆ- ಸಚಿವ ರಾಮಲಿಂಗರೆಡ್ಡಿ. ಬೆಂಗಳೂರು,ಸೆಪ್ಟಂಬರ್,30,2023(..):ಕಾಂಗ್ರೆಸ್ ಸರ್ಕಾರ ಆರು ತಿಂಗಳಲ್ಲಿ ಬೀಳುತ್ತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಸರ್ಕಾರ ನೂರಕ್ಕೆ ನೂರರಷ್ಟು ಐದು ವರ್ಷ ಅಧಿಕಾರದಲ್ಲಿರುತ್ತದೆ. 4 ವರ್ಷ 8 ತಿಂಗಳು ಅಧಿಕಾರದಲ್ಲಿರುತ್ತೆ. ಪುನಃ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಕೆಲವು ಹಿರಿಯರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ಮುಂದಿನ ದಿನಗಳಲ್ಲಿ ಅವಕಾಶ ಸಿಗಲಿದೆ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. : 100% - – – – -