ಹೆಚ್ ​ಡಿಕೆ ಯಾವಾಗ ಜ್ಯೋತಿಷ್ಯ ಹೇಳಲು ಶುರು ಮಾಡಿದ್ರೋ ಗೊತ್ತಿಲ್ಲ – ಗೃಹ ಸಚಿವ ಪರಮೇಶ್ವರ್ ಟಾಂಗ್ ತುಮಕೂರು,ಸೆಪ್ಟಂಬರ್,30,2023(..):ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.​ಡಿ ಕುಮಾರಸ್ವಾಮಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಢಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಚ್​ಡಿಕೆ ಯಾವಾಗ ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೆ ಗೊತ್ತಿಲ್ಲ ಎಂದರು. ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಡಾ.ಜಿ.ಪರಮೇಶ್ವರ್, ಬೆದರಿಕೆ ಕರೆ ಬಂದಿರುವ ಬಗ್ಗೆ ಸಾಹಿತಿಗಳು ನನ್ನ ಬಳಿ ಹೇಳಿಕೊಂಡಿದ್ದರು. ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಆ ಪತ್ರದ ಹಸ್ತಾಕ್ಷರ ನೋಡಿ ಆರೋಪಿ ಬಂಧಿಸಿದ್ದಾರೆ. ಬೆದರಿಕೆ ಪತ್ರ ಯಾರು ಬರೆಸುತ್ತಿದ್ದಾರೆ ಅನ್ನೋದು ತನಿಖೆ ಆಗಲಿದೆ ಎಂದರು. ಇನ್ನು ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗ್ತಿಲ್ಲ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಅದನ್ನೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಿಸುತ್ತಾರೆ. ಜಾತಿ ಆಧಾರದ ಮೇಲೆ ಅಧಿಕಾರಿಗಳನ್ನು ಹಾಕುವುದು ಮಾಡುವುದಿಲ್ಲ. ಯಾರು ಸಮರ್ಥ ಹಾಗೂ ಪ್ರಾಮಾಣಿಕರಿದ್ದಾರೆ ಅವರು ಕೆಲಸ ಮಾಡ್ತಾರೆ ಎಂದು ತಿಳಿಸಿದರು. : - - – -