ಮೈತ್ರಿ ಬಗ್ಗೆ ಬಹಳಷ್ಟು ಮುಖಂಡರಿಗೆ ವಿರೋಧ: ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ- ಡಿಸಿಎಂ ಡಿ.ಕೆ ಶಿವಕುಮಾರ್. ಬೆಂಗಳೂರು,ಸೆಪ್ಟಂಬರ್,28,2023(..):ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಹಳಷ್ಟು ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡೂ ಪಕ್ಷಗಳ ನಾಯಕರು ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್ ಸೇರುವ ಮನಸ್ಸು ಮಾಡುತ್ತಿದ್ದಾರೆ. ಈ ವಿಷಯ ಮತ್ತು ಮುಂಬರುವ ಪರಿಷತ್ ಚುನಾವಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಿರಿಯ ನಾಯಕರೊಂದಿಗೆ ಚರ್ಚಿಸಬೇಕಿದೆ ಎಂದರು. ಮೈತ್ರಿಗೆ ಬಗ್ಗೆ ಬಹಳಷ್ಟು ಜನಕ್ಕೆ ವಿರೋಧ ಇದೆ. ಕಾಂಗ್ರೆಸ್ ಪಕ್ಷಕ್ಕೆ ಸೇರವವರು ಯಾವುದೇ ಷರತ್ತು ವಿಧಿಸಿಲ್ಲ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. : – – --- - .