ನಾಳೆ ನಿವೃತ್ತ ನ್ಯಾಯಮೂರ್ತಿಗಳ ಸಭೆ ಕರೆದ ಸಿಎಂ ಸಿದ್ಧರಾಮಯ್ಯ. ಬೆಂಗಳೂರು,ಸೆಪ್ಟಂಬರ್,28,2023(..):ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಸ್ಥಿತಿ ತಲೆದೂರಿದೆ. ಈ ಮಧ್ಯೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಅತ್ತ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದ್ದು ಇದನ್ನ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಯ ಕಾವು ಜೋರಾಗಿದೆ. ಈ ಮಧ್ಯೆ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಿಎಂ ಸಿದ್ಧರಾಮಯ್ಯ ನಾಳೆಗೆ ನಿವೃತ್ತ ನ್ಯಾಯಮೂರ್ತಿಗಳ ಸಭೆ ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಸಂಜೆ ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಲಿದ್ದು, ಕಾನೂನು ತಜ್ಞರು ಸಚಿವರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಕಾವೇರಿ ನದಿ ನೀರು ವಿವಾದ ಕುರಿತು ನಿವೃತ್ತ ನ್ಯಾಯಮೂರ್ತಿಗಳ ಸಲಹೆ ಪಡೆಯಲಿದ್ದು, ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಿದ್ದಾರೆ. : - – – - .