ಕಾವೇರಿ ಹೋರಾಟ: ನಾಳೆ ಸಿಎಂ ಮನೆಗೆ ಮುತ್ತಿಗೆ- ರೈತ ಮುಖಂಡ ಕುರುಬೂರು ಶಾಂತಕುಮಾರ್. ಬೆಂಗಳೂರು,ಸೆಪ್ಟಂಬರ್,28,2023(..):ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇತ್ತ ರಾಜ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲೂ ಹೋರಾಟ ನಡೆಯುತ್ತಿದ್ದು ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಕುರುಬೂರು ಶಾಂತಕುಮಾರ್, ಕಾವೇರಿ ನೀರಿಗಾಗಿ ಆಗ್ರಹಿಸಿ ನಾಳೆ ರಾಷ್ಟ್ರೀಯ ರಾಜ್ಯ ಹೆದ್ದಾರಿ ಬಂದ್ ಚಳುವಳಿ ಮಾಡುತ್ತೇವೆ. ನೀರು ಬಿಡಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದವು. ಆದರೂ ಸಹ ಸರ್ಕಾರ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುತ್ತಿದೆ. ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ನಾಳೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುತ್ತದೆ. ರಾಜ್ಯಾದ್ಯಂತ ಹೆದ್ದಾರಿ ಬಂದ್ ಮಾಡುತ್ತೇವೆ ಎಂದು ತಿಳಿಸಿದರು. : –- ’ - –- - .