ಕಾವೇರಿಗಾಗಿ ಕರ್ನಾಟಕ ಬಂದ್: ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮ-ಗೃಹ ಸಚಿವ ಜಿ. ಪರಮೇಶ್ವರ್​​ ಬೆಂಗಳೂರು,ಸೆಪ್ಟಂಬರ್,29,2023(..):ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಇಂದು ಇಡೀ ಕರ್ನಾಟಕ ಬಂದ್ ಮಾಡಲಾಗಿದ್ದು ಈ ನಡುವೆ ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್​​ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ನಾವು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್​ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ಕಾನೂನಿನ ಪ್ರಕಾರ ಬಂದ್​ ಮಾಡಬಾರದು. ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದರು. ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ. ಸುಖ ಸುಮ್ಮನೆ ಬಂಧಿಸುವುದಿಲ್ಲ. ಕಾನೂನು ವಿರುದ್ಧ ನಡೆದುಕೊಂಡರೆ ಬೇರೆ ವಿಧಿಯಿಲ್ಲ ಎಂದು ಡಾ.ಜಿ ಪರಮೇಶ್ವರ್​​ ತಿಳಿಸಿದ್ದಾರೆ. : – - -.